ADVERTISEMENT

51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರ ದಾಳಿ, ಶೋಧಕಾರ್ಯ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 2:23 IST
Last Updated 19 ಜುಲೈ 2024, 2:23 IST
   

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ಶೋಧಕಾರ್ಯ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ 12 ದೂರುಗಳ ಸಂಬಂಧ ಈ ಶೋಧಕಾರ್ಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಪೊಲೀಸ್‌ನ 100 ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಮತ್ತು ತುಮಕೂರಿನಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧಕಾರ್ಯ ಮುಂದುವರೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.