ಬಿಬಿಎಂಪಿ ದಾಸರಹಳ್ಳಿ ವಿಭಾಗದ ಕಂದಾಯ ಇಲಾಖೆಯ ಅಧಿಕಾರಿ ಎನ್. ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ಬೆಂಗಳೂರು: ರಾಜ್ಯದ 15 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.
ಬಿಬಿಎಂಪಿ ದಾಸರಹಳ್ಳಿ ವಿಭಾಗದ ಕಂದಾಯ ಇಲಾಖೆಯ ಅಧಿಕಾರಿ ಎನ್. ವೆಂಕಟೇಶ್, ಬೆಂಗಳೂರು ನಗರದ ಬಿಡಿಎ ಕಚೇರಿಯ ಅಧಿಕಾರಿ ಕೆ. ಓಂಪ್ರಕಾಶ್ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಂಜನೇಯ ಮೂರ್ತಿ.ಎಂ, ಚಿತ್ರದುರ್ಗದ ಹಿರಿಯೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಸೇರಿದಂತೆ ಹಾಸನದ ಎನ್‌ಎಚ್‌ಎಐಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಜಯಣ್ಣ.ಆರ್ ಮನೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.