ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಬೆಂಗಳೂರು/ಕೊಡಗು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರ ಮನೆಯೂ ಸೇರಿ ರಾಜ್ಯದ 10 ಸ್ಥಳಗಳಲ್ಲಿ ಲೊಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಏಳು, ವಸತಿ ಇಲಾಖೆಯ ಸಿಬ್ಬಂದಿ ಒಬ್ಬರ ಮನೆ ಮತ್ತು ಕೊಡಗಿನಲ್ಲಿ ಮೂರು ಸ್ಥಳ ಸೇರಿ ಒಟ್ಟು ಹತ್ತು ಕಡೆ ದಾಳಿ ನಡೆದಿದೆ. ಬೆಂಗಳೂರು ಲೋಕಾಯುಕ್ತ ಪೊಲೀಸ್–1ರ ವ್ಯಾಪ್ತಿಯಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಆದಾಯ ತೆರಿಗೆ ಇಲಾಖೆಯು ನೀಡಿದ್ದ ದೂರಿನ ಮೇಲೆ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಗಳು ಶೋಧ ನಡೆಸಿದ್ದರು. ಆಗ ಪತ್ತೆಯಾಗಿದ್ದ ಲೆಕ್ಕಪತ್ರಗಳನ್ನು ಲೋಕಾಯುಕ್ತ ಪೊಲೀಸರಿಗೆ ಹಸ್ತಾಂತರಿಸಿ, ತನಿಖೆ ನಡೆಸುವಂತೆ ಕೋರಿದ್ದರು. ಅದರಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಪ್ರಕರಣಕ್ಕೂ, ಸರ್ಫರಾಜ್ ಅವರ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ಖಚಿತವಾಗಿಲ್ಲ.
ವಣಚಲು ತೋಟದಲ್ಲಿ ಲೋಕಾಯುಕ್ತ ಪೊಲೀಸರ ಶೋಧ
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರಿಗೆ ಸೇರಿದೆ ಎನ್ನಲಾದ ಸ್ಥಳಗಳ ಮೇಲೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ತಾಲ್ಲೂಕಿನ ಕಾಡಂಚಿನ ಗ್ರಾಮ ವಣಚಲು ಸಮೀಪ ಇರುವ ತೋಟ ಹಾಗೂ ನಿರ್ಮಾಣ ಹಂತದ ತೋಟದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.