ಕರ್ನಾಟಕ ಲೋಕಾಯುಕ್ತ
ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ (ಎಇಇ) ಹಾಗೂ ಇತರ ಇಬ್ಬರ ವಿರುದ್ಧ ಲೋಕಾಯುಕ್ತರು ದಾಳಿ ಮಾಡಿ ವಿಚಾರಣೆ ನಡೆಸಿದ್ದಾರೆ.
ಯಲಹಂಕ ಉಪನಗರದಲ್ಲಿರುವ ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಗೋವಿಂದಯ್ಯ ಹಾಗೂ ಹರಣಿ ಸತೀಶ್ ಅವರ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸರ್ಕಾರದ ಬೊಕ್ಕಸಕ್ಕೆ ಸುಮಾರು ₹ 10 ಕೋಟಿಗೂ ಹೆಚ್ಚು ನಷ್ಟಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಆರೋಪಿತ ಅಧಿಕಾರಿಗಳ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿ ವಿಚಾರಣೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.