ಕರ್ನಾಟಕ ಲೋಕಾಯುಕ್ತ
(ಸಾಂಕೇತಿಕ ಚಿತ್ರ)
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಶೋಧ ಕಾರ್ಯ ನಡೆಸುತ್ತಿದ್ದಾರೆ.
ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಎರಡು ಕಡೆ, ಬೆಳಗಾವಿಯಲ್ಲಿ ಎಡು ಕಡೆ, ಚಿತ್ರದುರ್ಗು, ರಾಯಚೂರು ಮತ್ತು ಬಾಗಕೋಟೆಯಲ್ಲಿ ತಲಾ ಒಂದು ಸ್ಥಳಗಳಲ್ಲಿ ದಾಳಿ ನಡೆದಿದೆ.
ಬೆಂಗಳೂರಿನಲ್ಲಿ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಕಾರ್ಯದರ್ಶಿ ಟಿ.ಕೆ.ರಮೇಶ್ ಅವರ ಮನೆಗಳ ಮೇಲೆ ದಾಳಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.