ADVERTISEMENT

ಪ್ರಶಾಂತ್ ಮಾಡಾಳ್ ಮನೆಯಲ್ಲಿ ₹6 ಕೋಟಿ ನಗದು ವಶ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 7:38 IST
Last Updated 3 ಮಾರ್ಚ್ 2023, 7:38 IST
   

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ ₹6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ.

ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು ₹40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ₹1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ:

ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ₹ 6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಚನ್ನಗಿರಿಯಲ್ಲಿದ್ದ ಮಾಡಾಳ್ ವಿರೂಪಾಕ್ಷಪ್ಪ ಕೂಡ ಬೆಂಗಳೂರಿಗೆ ಬಂದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅವರನ್ನೂ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.