ADVERTISEMENT

Lokayukta Raids: ರಾಜ್ಯದ 8 ಕಡೆ ಲೋಕಾಯುಕ್ತ ದಾಳಿ: ವ್ಯಾಪಕ ತಪಾಸಣೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2025, 4:26 IST
Last Updated 8 ಜನವರಿ 2025, 4:26 IST
<div class="paragraphs"><p> ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್ ನಿವಾಸ</p></div>

ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್ ನಿವಾಸ

   

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 

ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

8 ಅಧಿಕಾರಿಗಳ ವಿವರ...

ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ರವೀಂದ್ರ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು, ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಹಾಗೂ ಗದಗ-ಬೆಟಗೇರಿ ನಗರಸಭೆ ಎಂಜಿನಿಯರ್​​​​ಹುಚ್ಚೇಶ್ ಬಂಡಿವಡ್ಡರ್ ಕಚೇರಿ ಅವರ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಕೆಲ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ತೋಟದ ಮನೆಗಳ ಮೇಲೂ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಅಧಿಕಾರಿಗಳು ದಾಖಲೆ ಪತ್ರಗಳ ಸಹಿತ ವ್ಯಾಪಕ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.