ADVERTISEMENT

ಲಾಕ್‌ಡೌನ್: ರಾಮನಗರ ಜಿಲ್ಲೆಯಲ್ಲಿ ಕೈಗಾರಿಕೆ ಪುನರಾರಂಭಕ್ಕೆ ಎಚ್‌ಡಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2020, 9:20 IST
Last Updated 30 ಏಪ್ರಿಲ್ 2020, 9:20 IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ    

ರಾಮನಗರ: ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು.

ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರಿಸಿದರೂ, 9 ಜಿಲ್ಲೆಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು.

ಕರೋನಾ ವೈರಸ್ ಮುಕ್ತವಾಗಿರುವ ಜಿಲ್ಲೆಗಳಲ್ಲಿ ನೀಡಿರುವ ವಿನಾಯ್ತಿಯನ್ನು ತಕ್ಷಣವೇ ರಾಮನಗರ ಜಿಲ್ಲೆಗೂ ಅನ್ವಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಮುಖ್ಯಕಾರ್ಯದರ್ಶಿಯವರಿಗೆ ಒತ್ತಾಯಿಸುವುದಾಗಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.