ಇಡೀ ದೇಶದಲ್ಲಿ ಎನ್‌ಡಿಎ ಗೆಲುವಿನ ಕಡೆ ದಾಪುಗಾಲು ಹಾಕುತ್ತಿದೆ. ಲೋಕಸಭೆ ಚುನಾವಣೆಯಲ್ಲಿ 350 ಸ್ಥಾನಗಳನ್ನ ದಾಟಲಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ವ ದಾಟುತ್ತೆ ಅಂತಾ ಹೇಳಿತ್ತು ಆದರೆ ದಾಟಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಬಹುತೇಕ ಸೋಲನ್ನ ಒಪ್ಪಿಕೊಂಡಿದೆ. ಕಾಂಗ್ರೆಸ್ ನೀಡಿದ ಗ್ಯಾರಂಟಿಗೆ ವಾರಂಟಿ ಇಲ್ಲವೆಂದು ಋಜುವಾತಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.