ADVERTISEMENT

London Book Of World Records: ದಾಖಲೆ ಬರೆದ ಶಕ್ತಿ ಯೋಜನೆ, ಕೆಎಸ್‌ಆರ್‌ಟಿಸಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2025, 2:01 IST
Last Updated 15 ಅಕ್ಟೋಬರ್ 2025, 2:01 IST
<div class="paragraphs"><p>ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್</p></div>

ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್

   

ಬೆಂಗಳೂರು: 'ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ಎರಡು ಚಾರಿತ್ರಿಕ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಮಗದೊಮ್ಮೆ ಛಾಪು ಒತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆ ಮತ್ತು ವಿಶ್ವದಲ್ಲಿ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ ಎಂಬ ದಾಖಲೆಗೆ ಕೆಎಸ್‌ಆರ್‌ಟಿಸಿ ಭಾಜನವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಕರ್ನಾಟಕ ಎರಡು ದಾಖಲೆಗಳನ್ನು ಬರೆದಿದೆ ಎಂದು ತಿಳಿಸಿದ್ದಾರೆ.

'ಶಕ್ತಿ ಯೋಜನೆ ಮೂಲಕ ಮಹಿಳೆಯರು 546.10 ಕೋಟಿ ಉಚಿತ ಪ್ರಯಾಣವನ್ನು ಕೈಗೊಂಡಿದ್ದಾರೆ. ಹಾಗೆಯೇ ವಿಶ್ವದಲ್ಲೇ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ ಎಂಬ ದಾಖಲೆಗೆ ಕೆಎಸ್‌ಆರ್‌ಟಿಸಿ ಅರ್ಹವಾಗಿದೆ. 1997ರಿಂದ ಇಲ್ಲಿಯವರೆಗೆ 464 ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಗೌರವಕ್ಕೆ ಪಾತ್ರವಾಗಿದೆ' ಎಂದು ವಿವರಿಸಿದ್ದಾರೆ.

'ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ ಮತ್ತು ವಿಶ್ವ ದರ್ಜೆಯ ಸಾರ್ವಜನಿಕ ಸೇವೆ ನೀಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಈ ಮನ್ನಣೆಗಳು ಎಲ್ಲರನ್ನು ಒಳಗೊಳ್ಳುವ ನೀತಿಯಿಂದ ಏನನ್ನೂ ಸಾಧಿಸಬಹುದು ಎಂಬುದಕ್ಕೆ ಪ್ರತೀಕವಾಗಿದೆ' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.