ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಲಾಗಿದೆ.
ಯಲ್ಲಾಪುರ: ತಾಲ್ಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ಮೊತ್ತ ಬಿಡುಗಡೆಯ ಆದೇಶ ಪ್ರತಿ ನೀಡಿದರು. ಶಾಸಕ ಶಿವರಾಮ ಹೆಬ್ಬಾರ, ಸವಣೂರು ಶಾಸಕ ಯಾಸಿರ್ ಖಾನ್ ಪಠಾಣ ಆದೇಶ ಪ್ರತಿಯನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.
ದುರ್ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 12 ಜನರಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಯಲ್ಲಾಪುರ ಆಸ್ಪತ್ರೆ ಹಾಗೂ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮೃತದೇಹಗಳು ಇವೆ. ಅವುಗಳನ್ನು ಸವಣೂರಿಗೆ ತರುವ ಕೆಲಸ ನಡೆಯುತ್ತಿದೆ. ಮೃತರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ.
ಹಾವೇರಿ ಪೊಲೀಸ್ ಹೆಚ್ಚುವರಿ ಎಸ್ಪಿ ಲಕ್ಷ್ಮಣ ಶಿರಕೋಳ, ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ ಅವರು ಯಲ್ಲಾಪುರ ಆಸ್ಪತ್ರೆಯಲ್ಲಿಯೇ ಬೀಡು ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.