ADVERTISEMENT

‘ಲವ್ ಜಿಹಾದ್’ ಮಸೂದೆ ಮಂಡನೆ ಮುಂದಿನ ಬಾರಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 19:37 IST
Last Updated 7 ಡಿಸೆಂಬರ್ 2020, 19:37 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಸಾಗರ: ‘ಗೋ ಹತ್ಯೆ ನಿಷೇಧ ಮಸೂದೆಯನ್ನು ವಿಧಾನಮಂಡಲದ ಇದೇ ಅಧಿವೇಶನದಲ್ಲಿ ಮಂಡಿಸಲಾಗುವುದು. ‘ಲವ್ ಜಿಹಾದ್’ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ಕಾಯ್ದೆಯಾಗಿ ಜಾರಿಗೆ ತರುವುದು ನಿಶ್ಚಿತ’ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ವಿವಿಧ ಕಾಯ್ದೆ ಗಳನ್ನು ವಿರೋಧಿಸಿ ಮಂಗಳವಾರ ಕರೆ ನೀಡಿರುವ ಭಾರತ್ ಬಂದ್‌ ಕುರಿತ ಪ್ರಶ್ನೆಗೆ, ‘ಬಂದ್‌ನಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ರೈತ ಸಂಘಟನೆಗಳ ಪ್ರಮುಖರು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.