ADVERTISEMENT

ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ: ಯತ್ನಾಳ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 14:23 IST
Last Updated 10 ಆಗಸ್ಟ್ 2025, 14:23 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಕೊಪ್ಪಳ: ‘ರಾಜ್ಯದಲ್ಲಿ ಮುಸ್ಲಿಮರ ಸರ್ಕಾರ ಅಧಿಕಾರದಲ್ಲಿದ್ದು, ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ ನೀಡುವೆ. ಇದಕ್ಕಾಗಿ ಅಭಿಯಾನ ಆರಂಭಿಸಿ ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿಯ ಮುಸ್ಲಿಮರಿಗೆ ತಕ್ಕ ಉತ್ತರ ನೀಡುವೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ಕುರುಬರ ಓಣಿಯಲ್ಲಿ ಆ. 3ರಂದು ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ಧಪ್ಪ ನಾಯಕ ಅವರ ಮನೆಯವರಿಗೆ ಸಾಂತ್ವಾನ ಹೇಳಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ ‘ಮಸೀದಿ ಮುಂದೆಯೇ ಗವಿಸಿದ್ದಪ್ಪ ನಾಯಕನ ಕೊಲೆಯಾಗಿದ್ದರೂ ತಡೆಯುವ ಕೆಲಸವನ್ನು ಯಾರೂ ಮಾಡಿಲ್ಲ. ಲವ್ ಜಿಹಾದ್ ಮಾಡಿದಾಗ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುತ್ತದೆ. ಮುಸ್ಲಿಮರಿಗೆ ಮಾತ್ರ ಈಗಿನ ಸರ್ಕಾರ ನೆರವಾಗುತ್ತಿದೆ. ಈ ಕುರಿತು ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತೇನೆ’ ಎಂದರು.

‘ರಾಜ್ಯದಲ್ಲಿ ಮುಸ್ಲಿಂ ವ್ಯಕ್ತಿ ಕೊಲೆಯಾಗಿದ್ದರೆ ರಾಜ್ಯ ಸರ್ಕಾರ ಯಾವ ಮಾನದಂಡ ಆಧರಿಸಿ ಪರಿಹಾರ ಹಾಗೂ ನೌಕರಿ ಕೊಡುತ್ತಿತ್ತು; ಅದೇ ರೀತಿ ಹಿಂದೂ ವ್ಯಕ್ತಿ ಕೂಡ ಹತ್ಯೆಯಾದಾಗ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು. ಇದೇ ವೇಳೆ ಅವರು ಗೃಹ ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.