ADVERTISEMENT

Lok Sabha Polls 2024: ಮೊದಲ ದಿನ ನಾಮಪತ್ರ 29 ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 15:36 IST
Last Updated 28 ಮಾರ್ಚ್ 2024, 15:36 IST
<div class="paragraphs"><p>ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ರಾಮನಗರದಲ್ಲಿ&nbsp;ಗುರುವಾರ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ನಾಮಪತ್ರ ಸಲ್ಲಿಸಿದರು.</p></div>

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ರಾಮನಗರದಲ್ಲಿ ಗುರುವಾರ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ನಾಮಪತ್ರ ಸಲ್ಲಿಸಿದರು.

   

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನ 29 ನಾಮಪತ್ರ ಸಲ್ಲಿಕೆಯಾಗಿವೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಅಂದರೆ ಆರು ಹಾಗೂ ಉಡುಪಿ–ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ. 

ADVERTISEMENT

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಏಳು, ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ನ ತಲಾ ಒಬ್ಬರು ಹಾಗೂ ಏಳು ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.