ADVERTISEMENT

ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಐ.ಸವದತ್ತಿ ನಿಧನ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 21:49 IST
Last Updated 9 ಜೂನ್ 2021, 21:49 IST
ಡಾ. ಎಂ.ಐ.ಸವದತ್ತಿ
ಡಾ. ಎಂ.ಐ.ಸವದತ್ತಿ   

ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ.ಐ.ಸವದತ್ತಿ (90) ಇಲ್ಲಿನ ನವೋದಯ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಬುಧವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಕರ್ನಾಟಕ ವಿಶ್ವವಿದ್ಯಾಲಯದ ರುದ್ರಭೂಮಿಯಲ್ಲಿ ಸಂಜೆ ನೆರವೇರಿತು.

ಭೌತವಿಜ್ಞಾನ ವಿಭಾಗದ ಪ್ರಾಧ್ಯಾಪಕರಾಗಿದ್ದ ಡಾ. ಸವದತ್ತಿ ಅವರು ಕರ್ನಾಟಕ ಕಾಲೇಜು ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿ, ಡೀನ್‌ ಹಾಗೂ ಸಿಂಡಿಕೇಟ್ ಸದಸ್ಯರಾಗಿದ್ದರು. ನಂತರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಎರಡು ಅವಧಿಗೆ ಕುಲಪತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಯುಜಿಸಿ ಸದಸ್ಯರಾಗಿ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಮಿತಿಯ ಸಂಸ್ಥಾಪಕ ಉಪಾಧ್ಯಕ್ಷರಾಗಿಯೂ ಡಾ. ಸವದತ್ತಿ ಅವರು ತಮ್ಮ ಅಮೂಲ್ಯ ಸಲಹೆ, ಸೂಚನೆಗಳನ್ನು ನೀಡಿದ್ದರು.

ADVERTISEMENT

ಕರ್ನಾಟಕ ವಿಶ್ವವಿದ್ಯಾಲಯದ ಭೌತವಿಜ್ಞಾನ ವಿಭಾಗದಲ್ಲಿ ಅತ್ಯಾಧುನಿಕ ಲೇಸರ್ ಪ್ರಯೋಗಾಲಯವನ್ನು ಪ್ರಾರಂಭಿಸಿದ್ದರು. ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಸರ್ ಎಂ. ವಿಶ್ವೇಶ್ವರಯ್ಯ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಪ್ರಮುಖ ಪ್ರಶಸ್ತಿಗಳು ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.