ADVERTISEMENT

ಮಾತೆ ಮಹಾದೇವಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 7 ಜನವರಿ 2019, 19:06 IST
Last Updated 7 ಜನವರಿ 2019, 19:06 IST
ಮಾತೆ ಮಹಾದೇವಿ
ಮಾತೆ ಮಹಾದೇವಿ   

ಬಾಗಲಕೋಟೆ: ಇಲ್ಲಿನ ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಅವರು ಅಲ್ಲಿಯೇ 25 ದಿನಗಳ ಕಾಲ ತಂಗಿದ್ದರು.ಹವಾಮಾನ ವೈಪರಿತ್ಯದಿಂದ ಅಲ್ಲಿ ತೀವ್ರ ಅಸ್ವಸ್ಥಗೊಂಡ ಮಹಾದೇವಿ ಅವರನ್ನು ಜನವರಿ 2ರಂದು ಏರ್‌ ಆ್ಯಂಬುಲೆನ್ಸ್‌ ಮೂಲಕ ಬೆಂಗಳೂರಿನ ಆಶ್ರಮಕ್ಕೆ ಕರೆತರಲಾಯಿತು. ಮರುದಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

‘ಮಾತಾಜಿ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಳ್ಳುತ್ತಿದೆ. ಭಕ್ತರು ಆತಂಕಪಡುವ ಅಗತ್ಯವಿಲ್ಲ. ಜನವರಿ 11ರಿಂದ ಕೂಡಲಸಂಗಮದಲ್ಲಿ ಆರಂಭವಾಗುವ ಶರಣ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಬಸವ ಧರ್ಮಪೀಠದ ಕಾರ್ಯದರ್ಶಿ ಮಹಾದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.