ADVERTISEMENT

ಶ್ವಾಸಕೋಶದ ಸೋಂಕು: ಮಾತೆ ಮಹಾದೇವಿ ಆಸ್ಪತ್ರೆಗೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2019, 19:44 IST
Last Updated 10 ಮಾರ್ಚ್ 2019, 19:44 IST
ಮಾತೆ ಮಹಾದೇವಿ
ಮಾತೆ ಮಹಾದೇವಿ   

ಬಾಗಲಕೋಟೆ: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ, ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಾರೋಗ್ಯದ ಕಾರಣಮಾತೆಮಹಾದೇವಿ ಅವರಿಗೆ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಸವಧರ್ಮ ಪೀಠದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT