ADVERTISEMENT

ಮಾಡಾಳ್‌ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಲೋಕಾಯುಕ್ತ ಪರ ವಕೀಲರ ಆಕ್ಷೇಪಣೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2023, 22:43 IST
Last Updated 17 ಮಾರ್ಚ್ 2023, 22:43 IST
ಮಾಡಾಳ್ ವಿರೂಪಾಕ್ಷಪ್ಪ
ಮಾಡಾಳ್ ವಿರೂಪಾಕ್ಷಪ್ಪ   

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್‌) ನಿಯಮಿತದ ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರ ಅರ್ಜಿ ವಿಚಾರಣೆ ಪೂರೈಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಆಕ್ಷೇಪಣೆ ಸಲ್ಲಿಸಿ, ‘ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ತನಿಖೆಗೆ ಅನುಕೂಲವಾಗುತ್ತದೆ. ಆದ್ದರಿಂದ, ಅವರಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನು ತಿರಸ್ಕರಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT