
ಪ್ರಜಾವಾಣಿ ವಾರ್ತೆ
ನವದೆಹಲಿ: ತುಮಕೂರು ಜಿಲ್ಲೆಯ ಮಧುಗಿರಿ ಬೆಟ್ಟಕ್ಕೆ ರೋಪ್‌ವೇ (ಕೇಬಲ್ ಕಾರು) ಅಳವಡಿಸಲು ಅಗತ್ಯ ಅನುಮೋದನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಶನಿವಾರ ಇಲ್ಲಿ ಭೇಟಿ ಮಾಡಿದ ಅವರು ತುಮಕೂರು-ರಾಯದುರ್ಗ ರೈಲ್ವೆ ಕಾಮಗಾರಿ ಬಗ್ಗೆ ಚರ್ಚಿಸಿದರು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.