ADVERTISEMENT

ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 4:27 IST
Last Updated 3 ಆಗಸ್ಟ್ 2022, 4:27 IST
 ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ಬಿರುಕು ಬಿಟ್ಟಿರುವುದು – ಪ್ರಜಾವಾಣಿ ಚಿತ್ರ
ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ಬಿರುಕು ಬಿಟ್ಟಿರುವುದು – ಪ್ರಜಾವಾಣಿ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ. ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಇಂದು ಪರಿಶೀಲಿಸಲಿದ್ದಾರೆ‌.

ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳ ಹಲವು ಭಾಗಗಳು ಜಲಾವೃತಗೊಂಡಿವೆ. ಪಯಸ್ವಿನಿ ನದಿ ಮತ್ತಷ್ಟು ಉಕ್ಕೇರಿ ಹರಿಯುತ್ತಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

ಚೆಟ್ಟಳ್ಳಿ ಪಂಚಾಯಿತಿಯ ಪೊನ್ನತ್ ಮೊಟ್ಟೆ ಎಂಬಲ್ಲಿ ಅಜಿಜ್ ಮತ್ತು ಫಾತಿಮಾ ದಂಪತಿಯ ಮನೆಯ ಹಿಂಬದಿಯ ಮಣ್ಣು ಕುಸಿದು ಮರವೊಂದು ಮನೆ ಮೇಲೆ ಬಿದ್ದು ಹಾನಿಯಾಗಿದೆ.

ದಬಡ್ಕ ರಸ್ತೆ ಹಾಗೂ ಕೊಯನಾಡು ಸೇತುವೆಗಳೂ ಹಾನಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.