ADVERTISEMENT

ಮಹದಾಯಿ: ತಜ್ಞರ ಸಲಹೆಗೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2020, 19:16 IST
Last Updated 5 ಜನವರಿ 2020, 19:16 IST
ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದರು
ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದರು   

ಹುಬ್ಬಳ್ಳಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

ಮಹದಾಯಿ ನದಿ ನೀರನ್ನು ಮಲಪ್ರಭೆಗೆ ಹರಿಸುವ ಕಳಸಾ ಬಂಡೂರಿ ನಾಲಾ ಜೋಡಣೆ ಯೋಜನೆ ಕುರಿತು ಚರ್ಚಿಸಲು ಮೊದಲ ಬಾರಿಗೆ ನಡೆದ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಸರ್ವಪಕ್ಷಗಳ ಜನಪ್ರತಿನಿಧಿಗಳ ಸಭೆಯ ನಂತರ ಮಾತನಾಡಿದರು.

‘ಅಂತರ ರಾಜ್ಯಗಳ ನದಿ ವಿವಾದ ಇದು. ನಮ್ಮ ನಡೆ ಮತ್ತೊಂದು ಸಮಸ್ಯೆಗೆ ಕಾರಣವಾಗದಂತೆ ಮುಂದಿನ ಹೆಜ್ಜೆ ಇಡಬೇಕಾಗಿದೆ. ಆದ್ದರಿಂದ ಕಾನೂನು ತಜ್ಞರ ಸಲಹೆ ಪಡೆಯಲುಮೊದಲ ಸಭೆ
ಯಲ್ಲಿ ನಿರ್ಧರಿಸಲಾಯಿತು’ ಎಂದು ಸಭೆಯ ಬಳಿಕವಿವರಿಸಿದರು.

ADVERTISEMENT

‘ಈ ಭಾಗದ ಜನರ ಹಿತಾಸಕ್ತಿ ಕಾಪಾಡಲು ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಂದಾಗಿ ಸಭೆ ಮಾಡುವ ಅಗತ್ಯವಿತ್ತು. ಈ ನಿಟ್ಟಿನಲ್ಲಿ ಈಗ ಮೊದಲ ಪ್ರಯತ್ನ ಯಶಸ್ವಿಯಾಗಿದೆ. ಸಲಹೆ ಪಡೆದ ಬಳಿಕ ಎಲ್ಲ ಜನಪ್ರತಿನಿಧಿಗಳು ಸೇರಿ ಮತ್ತೊಮ್ಮೆ ಸಮಾಲೋಚಿಸುತ್ತೇವೆ’ ಎಂದು ಹೇಳಿದರು.

ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಾದಧಾರವಾಡ, ಗದಗ, ಬಾಗಲಕೋಟೆ ಮತ್ತು ಬೆಳಗಾವಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಬಹಳಷ್ಟು ಜನಪ್ರತಿನಿಧಿಗಳು ಗೈರು ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.