ನವದೆಹಲಿ: ಮಹದಾಯಿ ಜಲ ವಿವಾದ ನ್ಯಾಯಮಂಡಳಿಯು ಹೆಚ್ಚಿನ ವರದಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 20ರಿಂದ ಅನ್ವಯವಾಗುವಂತೆ ಒಂದು ವರ್ಷ ವಿಸ್ತರಿಸಲಾಗಿದೆ.
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ವಿವಾದಗಳನ್ನು ಪರಿಹರಿಸಲು ಸ್ಥಾಪಿಸಲಾದ ನ್ಯಾಯಮಂಡಳಿಯು ಹೆಚ್ಚಿನ ವರದಿ ನೀಡಲು ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಜಲಶಕ್ತಿ ಸಚಿವಾಲಯಕ್ಕೆ ಕೋರಿತ್ತು. ವರದಿ ನೀಡುವ ಅವಧಿಯನ್ನು ವಿಸ್ತರಿಸಿ ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಮಹದಾಯಿ ನದಿ ನೀರು ವಿವಾದ ಬಗೆಹರಿಸಲು ಅಂತರ ರಾಜ್ಯ ನದಿ ನೀರು ವಿವಾದ ಕಾಯ್ದೆ 1956ರ ಸೆಕ್ಷನ್ 4ರ ಅನ್ವಯ ಮಹದಾಯಿ ನ್ಯಾಯಮಂಡಳಿ ಸ್ಥಾಪಿಸಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನ್ಯಾಯಮಂಡಳಿಯು ವರದಿ ನೀಡಿದೆ. ಈ ವರದಿಯ ಬಗ್ಗೆ 2020ರ ಫೆ.20ರಂದು ಅಧಿಸೂಚನೆ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.