ADVERTISEMENT

ಇದು ಢೋಂಗಿ ಬಾಬಾ –38 ಕಳ್ಳರ ಗುಂಪು: ಎನ್‌ಡಿಎ ಮೈತ್ರಿಕೂಟದ ಬಗ್ಗೆ ಎಎಪಿ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜುಲೈ 2023, 4:23 IST
Last Updated 19 ಜುಲೈ 2023, 4:23 IST
   

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ‘ಎನ್‌ಡಿಎ’ ಮೈತ್ರಿಕೂಟ ಮತ್ತು ವಿರೋಧ ಪಕ್ಷಗಳನ್ನು ಒಳಗೊಂಡ ‘ಇಂಡಿಯಾ’ ಮೈತ್ರಿಕೂಟಗಳು ಸಿದ್ಧತೆ ನಡೆಸುತ್ತಿವೆ.

‘ಎನ್‌ಡಿಎ’ ಮೈತ್ರಿಕೂಟ ಕುರಿತು ಟ್ವೀಟ್ ಮಾಡಿರುವ ಆಮ್‌ ಆದ್ಮಿ ಪಕ್ಷ (ಎಎಪಿ), ‘ಅಲಿಬಾಬಾ ಮತ್ತು ನಲವತ್ತು ಕಳ್ಳರ ಕತೆ ಕೇಳಿರಬಹುದು. ಇದು ಢೋಂಗಿ ಬಾಬಾ ಮತ್ತು 38 ಕಳ್ಳರ ಗುಂಪು!, ಈ ಗುಂಪಿನಲ್ಲಿ ಎಷ್ಟೋ ಜನ ತಮ್ಮ ಪಕ್ಷಕ್ಕೇ ಚೂರಿ ಹಾಕಿದವರು ಇದ್ದಾರೆ, ಇ.ಡಿ - ಐ.ಟಿ ಭಯದಿಂದ ಬಂದವರು ಇದ್ದಾರೆ, ಪ್ರತ್ಯೇಕ ದೇಶಕ್ಕೆ ಬೇಡಿಕೆ ಇಟ್ಟುಕೊಂಡೇ ಪಕ್ಷ ಮಾಡಿಕೊಂಡಿರುವ ತುಕಡೆ – ತುಕಡೆ ಗ್ಯಾಂಗ್‌ನವರಿದ್ದಾರೆ, ಎಲ್ಲಿ ಅಧಿಕಾರ ಇರುತ್ತೋ ಅಲ್ಲಿ ಹೋಗುವ ಬಹಳಷ್ಟು ಗಂಜಿ ಗಿರಾಕಿಗಳಿದ್ದಾರೆ, ನಿನ್ನೆ ತನಕ ಕಳ್ಳರಾಗಿದ್ದವರು ಇಂದು ಮಳ್ಳರಾಗಿದ್ದಾರೆ, ಎಷ್ಟೇ ದೊಡ್ಡ ಭ್ರಷ್ಟ ಇದ್ದರೂ, ಪಕ್ಷ ಸೇರಿದ ಕೂಡಲೇ ಕ್ಲೀನ್ ಮಾಡಿಕೊಡುವ ಬಿಜೆಪಿ ವಾಷಿಂಗ್ ಮಿಷನ್ ಪಕ್ಷ ಇದೆ ಎಂದು ವಾಗ್ದಾಳಿ ನಡೆಸಿದೆ.

ಮುಂದುವರಿದು Welcome to NDA

ADVERTISEMENT

N : Narendra

D : Dummy of

A : Ambani & Adani #INDIAvsNDA ಎಂಬ ಹ್ಯಾಷ್‌ಟ್ಯಾಗ್‌ ಬಳಿಸಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮಣಿಸಲು ತಂತ್ರ ಹೆಣೆಯುತ್ತಿರುವ 26 ವಿರೋಧ ಪಕ್ಷಗಳು ಒಗ್ಗೂಡಿ ‘ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ’ (ಇಂಡಿಯನ್‌ ನ್ಯಾಷನಲ್‌ ಡೆವಲಪ್‌ಮೆಂಟಲ್‌ ಇನ್‌ಕ್ಲೂಸಿವ್‌ ಅಲಯನ್ಸ್– ‘ಇಂಡಿಯಾ’‌) ರಚಿಸಿಕೊಂಡಿದ್ದು, ಚುನಾವಣಾ ರಾಜಕೀಯದತ್ತ ಒಂದು ಹೆಜ್ಜೆ ಮುಂದಿಟ್ಟಿವೆ.

ಮೈತ್ರಿಕೂಟದ ಮುಂದಿನ ಸಭೆಯನ್ನು ಶೀಘ್ರದಲ್ಲಿ ಮುಂಬೈಯಲ್ಲಿ ನಡೆಸಿ, 11 ಸದಸ್ಯರ ಸಮನ್ವಯ ಸಮಿತಿ ರಚಿಸಲು ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ನಾಯಕರು ತೀರ್ಮಾನಿಸಿದ್ದಾರೆ.

ಇತ್ತ ಎನ್‌ಡಿಎ ಮೈತ್ರಿಕೂಟದ 38 ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ದೆಹಲಿಯಲ್ಲಿ ಮಂಗಳವಾರ ‘ಶಕ್ತಿ ಪ್ರದರ್ಶನ’ದ ಸಭೆ ನಡೆಸಿ ವಿಪಕ್ಷಗಳ ‘ಮಹಾ ಮೈತ್ರಿಕೂಟ’ಕ್ಕೆ ಸೆಡ್ಡು ಹೊಡೆದಿದ್ದಾರೆ.

ಇವನ್ನೂ ಓದಿ...

INDIA ಒಕ್ಕೂಟದ ವಿರುದ್ಧ ಶಕ್ತಿ ಪ್ರದರ್ಶಿಸಿದ ಮೋದಿ ಬಳಗ

ಎನ್‌ಡಿಎ ಮಣಿಸಲು ‘ಇಂಡಿಯಾ’ ಅಣಿ: ಬಿಜೆಪಿಯೇತರ 26 ವಿರೋಧ ಪಕ್ಷಗಳ ಮಹಾ ಮೈತ್ರಿಕೂಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.