ADVERTISEMENT

ಮಹಾರಾಷ್ಟ್ರ ಸರ್ಕಾರ ವಿರುದ್ಧ ಡಿಕೆಶಿ ಕಿಡಿ

​ಪ್ರಜಾವಾಣಿ ವಾರ್ತೆ
Published 12 ಮೇ 2019, 18:28 IST
Last Updated 12 ಮೇ 2019, 18:28 IST
ಸಚಿವ ಡಿ.ಕೆ. ಶಿವಕುಮಾರ್
ಸಚಿವ ಡಿ.ಕೆ. ಶಿವಕುಮಾರ್   

ಬೆಂಗಳೂರು: ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ವಿಧಿಸಿರುವ ‘ನೀರಿಗೆ ನೀರು’ ಷರತ್ತಿಗೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಭಾನುವಾರ ಮಾತನಾಡಿದ ಅವರು, ‘ಈ ಹಿಂದೆ ನೀರಿಗೆ ಹಣ ಪಡೆದು ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ನೀರು ಹರಿಸುತ್ತಿತ್ತು. ಆದರೆ, ಈಗ ನೀರಿಗೆ ನೀರನ್ನೇ ವಾಪಸು ಕೇಳುತ್ತಿದ್ದಾರೆ. ನಾವು ಎಲ್ಲಿಂದ ನೀರು ವಾಪಸು ನೀಡಬೇಕು ಎಂಬ ಬಗ್ಗೆ ಯೋಚನೆ ಮಾಡುತ್ತಿದ್ದೇವೆ’ ಎಂದರು.

‘ಷರತ್ತು ವಿಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಗನ್ ಪಾಯಿಂಟ್ ತುದಿಯಲ್ಲಿ ನಮ್ಮನ್ಜು ಇಡಬಾರದಿತ್ತು. ಹಿಂದೆಂದೂ ಹೀಗೆ ಆಗಿರಲಿಲ್ಲ. ‘ನೀರಿಗೆ ನೀರು’ ಕೊಡುವ ವಿಚಾರದಲ್ಲಿ ತಾಂತ್ರಿಕ ಸಮಿತಿ ತೀರ್ಮಾನಿಸಬೇಕಿದೆ’ ಎಂದು ಅವರು ವಿವರಿಸಿದರು.

ADVERTISEMENT

‘ರಾಜಕಾರಣ ಏನೇ ಇರಲಿ, ರಾಜಕಾರಣಿಗಳು ಮಾತಿಗೆ ಬದ್ದರಾಗಿರಬೇಕು. ಅವರು ಏನೇ ರಾಜಕೀಯ ಮಾಡಿದರೂ ನಾವಂತೂ ನೀರು ಪಡೆಯಲು ಮುಂದಾಗುತ್ತೇವೆ. ನಮ್ಮ ಜನರ ಸಲುವಾಗಿ ತ್ಯಾಗಕ್ಕೆ ಸಿದ್ಧರಾಗಿದ್ದೇವೆ. ಮಹಾರಾಷ್ಡ್ರ ಸರ್ಕಾರ ಹೇಳಿದಂತೆ ಒಪ್ಪಂದಕ್ಕೆ (ಎಂಓಯು) ಸಹಿ ಮಾಡುತ್ತೇವೆ’ ಎಂದರು.

ಮಹಾರಾಷ್ಟ್ರದ ಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವುದರಿಂದ ಬರಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮಹಾರಾಷ್ಟ್ರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಮನವಿಗೆ ಸ್ಪಂದಿಸಿದ್ದ ಮಹಾರಾಷ್ಟ್ರ ಸರ್ಕಾರ, ನೀರು ಬಿಡುವ ಬಗ್ಗೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರಿಗೆ ಮಾಹಿತಿ ರವಾನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.