ADVERTISEMENT

ಮಹಾರಾಷ್ಟ್ರ ಸರ್ಕಾರ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 6:31 IST
Last Updated 18 ಜನವರಿ 2021, 6:31 IST
ರಮೇಶ ಜಾರಕಿಹೊಳಿ, ಜಲ ಸಂಪನ್ಮೂಲ ಸಚಿವ
ರಮೇಶ ಜಾರಕಿಹೊಳಿ, ಜಲ ಸಂಪನ್ಮೂಲ ಸಚಿವ    

ಬೆಳಗಾವಿ: ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

'ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ' ಎಂಬ ಮಹಾರಾಷ್ಟ್ರ ನುಖ್ಯ ಉದ್ಧವ್ ಠಾಕ್ರೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಆ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ರಾಜ್ಯದ ಒಂದಿಂಚೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ದಟತನದ ಹೇಳಿಕೆಯನ್ನು ಖಂಡಿಸುತ್ತೇನೆ. ಕನ್ನಡ ನಾಡಿನ ನೆಲ, ಜಲ ಮತ್ತು ಭಾಷೆಯ ರಕ್ಷಣೆಗೆ ನಾವು ಕಟಿಬದ್ಧರಾಗಿದ್ದೇವೆ. ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ ನಡೆದುಕೊಂಡರೇ ಪ್ರತ್ಯುತ್ತರ ನೀಡಲು ನಾವೂ ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಪ್ರತ್ಯುತ್ತರ ಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.