ADVERTISEMENT

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ವಿಚಾರಣೆಗೆ ಬಾರದ ಅರ್ಜಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 20:45 IST
Last Updated 30 ನವೆಂಬರ್ 2022, 20:45 IST
   

ನವದೆಹಲಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವ್ಯಾಜ್ಯಕ್ಕೆ ಸಂಬಂಧಿಸಿದ ಅರ್ಜಿಯು ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ವಿಚಾರಣೆಗೆ ಬರಲಿಲ್ಲ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಪೀಠದ ಎದುರು ಅರ್ಜಿ ವಿಚಾರಣೆಗೆ ನಿಗದಿಯಾಗಿತ್ತು. ಆದರೆ ನ್ಯಾಯಮೂರ್ತಿಗಳು ಜಲ್ಲಿ ಕಟ್ಟುಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದ್ದರಿಂದ, ಗಡಿ ವ್ಯಾಜ್ಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಎತ್ತಿಕೊಳ್ಳಲು ಸಾಧ್ಯವಾಗಲಿಲ್ಲ.

ಇದು ಮತ್ತೊಂದು ದಿನ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಕರ್ನಾಟಕದ ಕೆಲವು ಗ್ರಾಮಗಳನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೋರಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ADVERTISEMENT

ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರ ವಾದ ಮಂಡಿ ಸಲು, ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ನೇತೃತ್ವದ ತಂಡವನ್ನು ಕರ್ನಾಟಕ ಸರ್ಕಾರ ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.