ADVERTISEMENT

ರಾಜ್ಯದ ಪೊಲೀಸರಿಗೆ ಮಹಾರಾಷ್ಟ್ರ ಪೊಲೀಸರ ಭದ್ರತೆ!

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 13:07 IST
Last Updated 18 ಡಿಸೆಂಬರ್ 2021, 13:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ರಾಜ್ಯದ ಪೊಲೀಸ್‌ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಶನಿವಾರ ಭದ್ರತೆ ನೀಡಿ, ಗಡಿ ದಾಟಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು, ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿದ್ದರು. ಅವರಿದ್ದ ವಾಹನಕ್ಕೆ ಅಲ್ಲಿನ ಪೊಲೀಸರು ಭದ್ರತೆ ನೀಡಿದ್ದಾರೆ.

ಬೆಂಗಳೂರರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ್ದನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು, ಕರ್ನಾಟಕದ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಾಹನಕ್ಕೆ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.