ADVERTISEMENT

ಎಚ್.ಡಿ.ದೇವೇಗೌಡ ಅವರಿಗೆ ’ಮಹರ್ಷಿ ವಾಲ್ಮೀಕಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2018, 5:23 IST
Last Updated 23 ಅಕ್ಟೋಬರ್ 2018, 5:23 IST
ದೇವೇಗೌಡ ಅವರನ್ನು ಭೇಟಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
ದೇವೇಗೌಡ ಅವರನ್ನು ಭೇಟಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ    

ಬೆಂಗಳೂರು: ಜೆಡಿಎಸ್ ವರಿಷ್ಠ‌, ಸಂಸದ ಎಚ್.ಡಿ.ದೇವೇಗೌಡ ಅವರನ್ನು ಈ ಬಾರಿಯ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿ ಈ ಆಯ್ಕೆ ಮಾಡಿದೆ.

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇವೇಗೌಡ ಅವರನ್ನು ಪದ್ಮನಾಭನಗರದ ಅವರನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಂದು, ಪ್ರಶಸ್ತಿ ಸ್ವೀಕರಿಸುವಂತೆ ಮನವಿ ಮಾಡಿದರು.

ADVERTISEMENT

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬುಧವಾರ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.