ADVERTISEMENT

VIDEO | ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ಯೂಟ್ಯೂಬರ್ ಸಮೀರ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 12:56 IST
Last Updated 22 ಆಗಸ್ಟ್ 2025, 12:56 IST

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿಯವರನ್ನು ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸರು ಗುರುವಾರ ಬಂಧಿಸಿದರು. ‘ಮಹೇಶ್‌ ಶೆಟ್ಟಿ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಹಿರಿಯಡ್ಕ ಜೈಲಿಗೆ ಕರೆದೊಯ್ಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ. ಇನ್ನು, ಧರ್ಮಸ್ಥಳ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯೂಟ್ಯೂಬರ್‌ ಸಮೀರ್ ಎಂ.ಡಿ.ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.