ADVERTISEMENT

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 7:21 IST
Last Updated 23 ಆಗಸ್ಟ್ 2025, 7:21 IST
   

ಉಡುಪಿ: ಬಿಜೆಪಿ ರಾಷ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶನಿವಾರ ನಡೆಯಿತು.

ದೂರುದಾರ ಪರ ವಕೀಲ ಶಂಭು ಶರ್ಮ ಅವರು ನ್ಯಾಯಾಲಯಕ್ಕೆ ವಕಾಲತು ಸಲ್ಲಿಸಿದರು.

ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಹಾಯಕ ಸರ್ಕಾರಿ ವಕೀಲರು ಸಮಯ ಕೇಳಿದರು. ಈ ಕಾರಣಕ್ಕೆ ನ್ಯಾಯಾಧೀಶರು ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿದರು ಎಂದು ತಿಳಿದು ಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.