
ಬೆಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡಿದ್ದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
‘ನನ್ನ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಧ್ಯಂತರ ಆದೇಶ ನೀಡಿದೆ.
ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಂ.ಆರ್.ಬಾಲಕೃಷ್ಣ ಅವರ ವಾದ ಆಲಿಸಿದ ನ್ಯಾಯಪೀಠ, ಬೆಳ್ತಂಗಡಿ ಠಾಣಾ ಪೊಲೀಸ್ ಮತ್ತು ಪ್ರಕರಣದ ದೂರುದಾರ ಎಸ್‌ಐಟಿ ಅಧಿಕಾರಿ ಸಿ.ಎ.ಸೈಮನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ 2025ರ ಆಗಸ್ಟ್ 26ರಂದು ಶೋಧ ನಡೆಸಿದ್ದ ಎಸ್‌ಐಟಿ ಪೊಲೀಸರು, ಮನೆಯಲ್ಲಿ ಪರವಾನಗಿ ಇಲ್ಲದ ಏರ್ ಗನ್ ವಶಪಡಿಸಿಕೊಂಡು ಶಸ್ತ್ರಾಸ್ತ್ರ ಕಾಯ್ದೆ-1959ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.