ಬೆಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿರೀಕ್ಷಣೆಯಲ್ಲಿದ್ದ ಜಿ. ಕುಮಾರ್ ನಾಯ್ಕ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಿಬಿಎಂಪಿ ಆಯುಕ್ತ ಹುದ್ದೆಯ ಜೊತೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಎನ್. ಮಂಜುನಾಥ್ ಪ್ರಸಾದ್ ಅವರು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.