ADVERTISEMENT

ಮಹಿಳಾ ಸಾಂತ್ವನ ಕೇಂದ್ರ ಮತ್ತೆ ಆರಂಭ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 16 ಮೇ 2020, 20:00 IST
Last Updated 16 ಮೇ 2020, 20:00 IST
ಬಿ.ಎಸ್‌ ಯಡಿಯೂರಪ್ಪ
ಬಿ.ಎಸ್‌ ಯಡಿಯೂರಪ್ಪ    

ಬೆಂಗಳೂರು: ‘ರಾಜ್ಯದಲ್ಲಿರುವ ಎಲ್ಲ ಮಹಿಳಾ ಸಾಂತ್ವನ ಕೇಂದ್ರಗಳನ್ನು ಮತ್ತೆ ತೆರೆಯಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಶನಿವಾರ ಇಲ್ಲಿ ತಮ್ಮನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಈ ಆಶ್ವಾಸನೆ ನೀಡಿದರು.

‘ಸಾಂತ್ವನ ಕೇಂದ್ರ ಬಹಳ ಮುಖ್ಯ, ಗ್ರಾಮೀಣ ಭಾಗದ ಅದೆಷ್ಟೋ ಹೆಣ್ಣುಮಕ್ಕಳಿಗೆ ಇದರಿಂದ ಪ್ರಯೋಜನವಾಗಿದೆ. ನಾನು ಶಾಸಕಿಯಾಗುವ ಮೊದಲು ಇಂತಹ ಸಾಂತ್ವನ ಕೇಂದ್ರ ನಡೆಸುತ್ತಿದ್ದೆ. ಇದೆಲ್ಲವನ್ನೂ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿದೆ. ಹೀಗಾಗಿ ಅವರು ಸಾಂತ್ವನ ಕೇಂದ್ರಗಳನ್ನು ಮತ್ತೆ ಆರಂಭಿಸಲು ಒಪ್ಪಿಕೊಂಡಿದ್ದಾರೆ. ಶೀಘ್ರ ಆದೇಶ ಹೊರಬೀಳುವ ನಿರೀಕ್ಷೆ ಇದೆ’ ಎಂದು ಸಚಿವರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ರದ್ದುಗೊಂಡಿರುವ ‘ಮಾತೃಶ್ರೀ’ ಯೋಜನೆಯ ಬಗ್ಗೆ ಸದ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.