ADVERTISEMENT

PHOTOS | ಬೆಂಗಳೂರಿನ ಸ್ವಾತಿಗೆ ವಿಶ್ವಸಂಸ್ಥೆ ಪ್ರಶಸ್ತಿಯ ಗರಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 10:12 IST
Last Updated 11 ಜನವರಿ 2026, 10:12 IST
<div class="paragraphs"><p>ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೀಡುವ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ–2025ಕ್ಕೆ ಭಾಜನರಾಗಿದ್ದಾರೆ.</p></div>

ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೀಡುವ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ–2025ಕ್ಕೆ ಭಾಜನರಾಗಿದ್ದಾರೆ.

   

ವಿವಿಧ ಕಾರ್ಯಾಚರಣೆಗಳಲ್ಲಿನ ಶ್ರೇಷ್ಠ ಸೇವೆಯನ್ನು ಗುರುತಿಸಿ ನೀಡುವ ಪ್ರಶಸ್ತಿಗಳನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್‌ ಘೋಷಿಸಿದ್ದು, ಸಂಘರ್ಷ ಪೀಡಿತ ದಕ್ಷಿಣ ಸೂಡನ್‌ನಲ್ಲಿ ಮಹಿಳೆಯರ ರಕ್ಷಣೆ, ಸಮುದಾಯದ ನೆಮ್ಮದಿಗೆ ಕೈಗೊಂಡ ಸಂವೇದನಾಶೀಲ ಕ್ರಮಗಳಿಗಾಗಿ ಸ್ವಾತಿ ಅವರಿಗೆ ಪ್ರಶಸ್ತಿ ಒಲಿದಿದೆ.

 ‘ಸಮಾನ ಪಾಲುದಾರಿಕೆ–ಶಾಶ್ವತ ಶಾಂತಿ’ ಎನ್ನುವುದು ಅವರ ಧ್ಯೇಯವಾಗಿದ್ದು, ಶಾಂತಿ ರಕ್ಷಣಾ ಕಾರ್ಯಾಚರಣೆಗಳ ಮುಂದಾಳತ್ವದಲ್ಲಿ ಲಿಂಗ ಸಮಾನತೆಗೆ ಒತ್ತು ನೀಡಿದ್ದಾರೆ.

ADVERTISEMENT

ವಿಶ್ವದಾದ್ಯಂತ ಇರುವ ಎಲ್ಲ ಶಾಂತಿ ರಕ್ಷಣಾ ಕಾರ್ಯಚರಣೆ ಹಾಗೂ ವಿಶ್ವ ಸಂಸ್ಥೆಗಳಿಂದ ಬಂದ ನಾಮನಿರ್ದೇಶನಗಳಲ್ಲಿ ಸ್ವಾತಿ  ಆಯ್ಕೆಯಾಗಿದ್ದಾರೆ.

ನಾಲ್ಕು ಅಂತಿಮ ಸ್ಪರ್ಧಿಗಳ ನಡುವೆ ನಡೆದ ಮತದಾನದಲ್ಲಿ ಅತ್ಯಧಿಕ ಮತಗಳನ್ನು ಪಡೆದು ಈ ಗೌರವಕ್ಕೆ ಪಾತ್ರವಾಗಿದ್ದಾರೆ.

ಎಂಜಿನಿಯರಿಂಗ್‌ ಪದವೀಧರೆ ಸ್ವಾತಿ ಅವರು ಬೆಂಗಳೂರಿನ ಲಿಂಗರಾಜಪುರದ ಖಾಸಗಿ ಕಂಪನಿ ಉದ್ಯೋಗಿ ಶಾಂತಕುಮಾರ್‌, ಸರ್ಕಾರಿ ಶಾಲಾ ಶಿಕ್ಷಕಿ ರಾಜಮಣಿ ದಂಪತಿ ಪುತ್ರಿ.

ಎಂಟು ವರ್ಷಗಳಿಂದ ಭಾರತೀಯ ಸೇನೆಯಲ್ಲಿದ್ದು, ಒಂದೂವರೆ ವರ್ಷದಿಂದ ದಕ್ಷಿಣ ಸೂಡನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿ ಸೇವಾನಿರತರಾಗಿದ್ದಾರೆ.

ವಿಶ್ವಸಂಸ್ಥೆಯ ಶಾಂತಿ‍ಪಾಲನಾ ಪಡೆಯಲ್ಲಿ ತಂಡವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಸೇನೆಯಲ್ಲೂ ಲಿಂಗಸಮಾನತೆಯನ್ನು ಬಲಗೊಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ತಳಮಟ್ಟದ ಸಂವಹನ ಮತ್ತು ಸೇನೆಯ ನಂಟನ್ನು ಮತ್ತಷ್ಟು ಗಟ್ಟಿ ಮಾಡಿದ್ದಾರೆ.

ಚುರುಕಾದ ವಾಯುಗಸ್ತುಗಳ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಇದರಿಂದ ಸುಡಾನ್‌ನ 5,000ಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ.

 ಸ್ವಾತಿ ಗಳಿಸಿದ ಸಮುದಾಯದ ವಿಶ್ವಾಸ ವಿಶ್ವಸಂಸ್ಥೆಯ ಮುಂದಿನ ಕೆಲಸಗಳಿಗೂ ಪ್ರೇರಣೆಯಾಗಿದೆ’ ಎಂದು ಗುಟೆರೆಸ್‌ ಶ್ಲಾಘಿಸಿದ್ದಾರೆ. 

ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌

ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌

ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌

ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌