ADVERTISEMENT

ಸೋಂಕಿತರಿಗೆ ‘ಮೇಕ್‍ ಶಿಫ್ಟ್’ ಆಸ್ಪತ್ರೆ: ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 21:26 IST
Last Updated 24 ಏಪ್ರಿಲ್ 2021, 21:26 IST
ಸುಧಾಕರ್
ಸುಧಾಕರ್   

ಬೆಂಗಳೂರು: ‘ಕೊರೊನಾ ಸೋಂಕಿತರಿಗಾಗಿ ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಐಸಿಯು ಹೊಂದಿರುವ ‘ಮೇಕ್‍ ಶಿಫ್ಟ್’ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಶನಿವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ 2 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಿ ಸಲು ನಿರ್ಧರಿಸಲಾಗಿದೆ. ಮೈಸೂರು, ಬೀದರ್, ಹುಬ್ಬಳ್ಳಿ, ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ಮಾಡ್ಯೂಲರ್ ಐಸಿಯು ಹೊಂದಿರುವ 200ರಿಂದ 250 ಹಾಸಿಗೆ ಸಾಮರ್ಥ್ಯ ಮೇಕ್‍ ಶಿಫ್ಟ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದ್ದು, 15 ದಿನಗಳ ಒಳಗೆ ಈ ಆಸ್ಪತ್ರೆಗಳು ನಿರ್ಮಾಣವಾಗಲಿದೆ’ ಎಂದರು.

‘ಕಡಿಮೆ ಲಕ್ಷಣ ಇರುವವರು ಆತಂಕದಿಂದ ಆಸ್ಪತೆಗೆ ದಾಖಲಾದರೆ, ತೀವ್ರ ಸೋಂಕಿನಿಂದ ಬಳಲುತ್ತಿರುವವರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಖಾಸಗಿ ಆಸ್ಪತ್ರೆಗಳು, ವೈದ್ಯರು ಕಡಿಮೆ ಲಕ್ಷಣ ಇರುವವರನ್ನು ದಾಖಲಿಸಿಕೊಳ್ಳ ಬಾರದು. ಈ ರೀತಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ ಸಚಿವರು, ‘ಖಾಸಗಿ ಆಸ್ಪತ್ರೆಗಳಲ್ಲಿ ಶೇ 80ರಷ್ಟು ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಿ ಡಲು ಆದೇಶಿಸಲಾಗುವುದು’ ಎಂದರು.

ADVERTISEMENT

‘ಕೋವಿಡ್‌ ಎರಡನೇ ಅಲೆಯಲ್ಲಿ ರೂಪಾಂತರಗೊಂಡ ವೈರಾಣು ಬಂದಿದ್ದು, ಹೊಸ ರೋಗದಂತಿದೆ. ವೈರಾಣು ರೂಪಾಂತರ ಆದಂತೆ ಸೋಂಕು ಹೆಚ್ಚಾಗಬಹುದು. ವೈದ್ಯ ಕೀಯ ಜಗತ್ತಿಗೆ ಇದು ಸವಾಲಾಗಿ ಪರಿಣ ಮಿಸಿದೆ. ರಾಜ್ಯದಲ್ಲಿ ಹೆಚ್ಚು ಜನರು ಸೋಂಕಿತರಾದರೂ ಸಾವಿನ ಪ್ರಮಾಣ ಶೇ 0.4 ರಷ್ಟಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.