ADVERTISEMENT

ವಿಚಾರಣೆಗೆ ಆಕ್ಷೇಪ: ಮಳಲಿ ಮಸೀದಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 5:50 IST
Last Updated 16 ಜುಲೈ 2022, 5:50 IST
   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯವು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವುದನ್ನು ಆಕ್ಷೇಪಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಮಂಗಳೂರಿನ ತೆಂಕ ಎಡಪಾಡಿಯ ಧನಂಜಯ್ ಹಾಗೂ ಬಡಗು ಎಡಪಾಡಿಯ ಮನೋಜ್ ಕುಮಾರ್ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶುಕ್ರವಾರ ಪ್ರಕಟಿಸಿತು.

ಇದರಿಂದಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಾದ-ಪ್ರತಿವಾದ ಆಲಿಸಿದರೂ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಜೂನ್ 13ರಂದು ನೀಡಿದ್ದ ಮಧ್ಯಂತರ ಆದೇಶವೂತೆರವುಗೊಂಡಂತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.