ADVERTISEMENT

ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ: 3ನೇ ಆರೋಪಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 17:34 IST
Last Updated 2 ಡಿಸೆಂಬರ್ 2025, 17:34 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಎದುರು 2013ರಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ 3ನೇ ಆರೋಪಿಯಾದ ತಮಿಳುನಾಡಿನ ಕಿಚನ್‌ ಬುಹಾರಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.

ಜಾಮೀನು ಕೋರಿ ಬುಹಾರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್‌.ಮುದಗಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಮೇಲ್ಮನವಿದಾರ ಪ್ರಕರಣದ ಮುಖ್ಯ ಸೂತ್ರಧಾರ ಆಗಿರುವುದನ್ನು ದೋಷಾರೋಪ ಪಟ್ಟಿಯ ದಾಖಲೆಗಳು ಮೇಲ್ನೋಟಕ್ಕೇ ದೃಢಪಡಿಸುತ್ತವೆ’ ಎಂಬ ಕಾರಣ ನೀಡಿ ನ್ಯಾಯಪೀಠ ಜಾಮೀನು ತಿರಸ್ಕರಿಸಿದೆ.

ADVERTISEMENT

ಜಾಮೀನು ತಿರಸ್ಕರಿಸಿ ನಗರದ ಎನ್‌ಐಎ ವಿಶೇಷ ನ್ಯಾಯಾಲಯ 2024ರ ಫೆಬ್ರುವರಿ 23ರಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.