ADVERTISEMENT

ಖರ್ಗೆಗೆ ಇ.ಡಿ ಸಮನ್ಸ್‌: ಬಿಜೆಪಿಯಿಂದ ಸೇಡಿನ ರಾಜಕಾರಣ– ಸಿದ್ದರಾಮಯ್ಯ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಆಗಸ್ಟ್ 2022, 16:16 IST
Last Updated 4 ಆಗಸ್ಟ್ 2022, 16:16 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯವು(ಇ.ಡಿ) ಸಮನ್ಸ್ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸೇಡಿನ ರಾಜಕಾರಣವನ್ನು ಮುಂದುವರೆಸಿದೆ ಎಂದು ಅವರು ಹರಿಹಾಯ್ದಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು, ‘ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಬಿಜೆಪಿ ಸೇಡಿನ ರಾಜಕೀಯವನ್ನು ಮುಂದುವರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇ.ಡಿ ಕರೆಸಿದೆ. ಆ ಮೂಲಕ ಸಂಸತ್ತಿನ ಅಧಿವೇಶನಕ್ಕೆ ಅಡ್ಡಿಪಡಿಸಲು ಸರ್ಕಾರ ಯತ್ನಿಸುತ್ತಿದೆ. ತನ್ನ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ’ ಎಂದು ಟೀಕಿಸಿದ್ದಾರೆ.

ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಒಡೆತನದ ಯಂಗ್ ಇಂಡಿಯಾ ಕಂಪನಿಯಲ್ಲಿ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಕಚೇರಿಯಲ್ಲಿ ಈ ಶೋಧ ನಡೆಯುತ್ತಿದ್ದು, ಸಂಸ್ಥೆಯ ಪರವಾಗಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.