ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ‘ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತ್ತು ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಡೆಯಲಿದೆ. ಈ ಸಭೆಯಲ್ಲಿ ಅನೇಕ ವಿಷಯಗಳ ಕುರಿತು ಚರ್ಚೆ ಮಾಡುತ್ತೇವೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸಭೆಯಲ್ಲಿ ಚರ್ಚಿಸಲು ಕಾರ್ಯಸೂಚಿ ಸಿದ್ಧಪಡಿಸಿಕೊಂಡಿದ್ದೇವೆ. ಕೆಲವು ನಿರ್ಣಯಗಳನ್ನು ಅಂಗೀಕರಿಸುತ್ತೇವೆ. ಈ ಹಿಂದೆ ತೆಗೆದುಕೊಂಡಿರುವ ನಿರ್ಣಯಗಳನ್ನು ಅಧಿಕೃತಗೊಳಿಸುತ್ತೇವೆ’ ಎಂದರು.
‘ಸಭೆಯ ಬಳಿಕ ದೇಶಕ್ಕೆ ಅಧಿಕೃತ ಸಂದೇಶ ಕೊಡುತ್ತೇವೆ. ಆ ಸಂದೇಶ ಏನೆಂದು ಇಲ್ಲಿ ಹೇಳುವುದು ಸರಿಯಲ್ಲ’ ಎಂದೂ ಹೇಳಿದರು.
ಪಕ್ಷ ಸಂಘಟನೆ ವರ್ಷವೆಂದು ಘೋಷಿಸಿದ್ದರೂ ಕೆಲವು ರಾಜ್ಯಗಳಲ್ಲಿ ಪದಾಧಿಕಾರಿಗಳ ನೇಮಕಾತಿ ಬಾಕಿ ಉಳಿದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ಎಲ್ಲವನ್ನೂ ಮಾಡುತ್ತಿದ್ದೇವೆ. ಈಗಾಗಲೇ ಬಿಹಾರ, ಉತ್ತರ ಪ್ರದೇಶ, ಅಸ್ಸಾಂ ರಾಜ್ಯಗಳ ಅಧ್ಯಕ್ಷರ ನೇಮಕ ಮಾಡಿದ್ದೇವೆ’ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.