ADVERTISEMENT

ಕೊಪ್ಪಳ: ಜೆಸ್ಕಾಂ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ವ್ಯಕ್ತಿಯ ಬಂಧನ

ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಖಚಿತಪಡಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 24 ಮೇ 2023, 13:25 IST
Last Updated 24 ಮೇ 2023, 13:25 IST
ಚಂದ್ರಶೇಖರ ಹಿರೇಮಠ (ಹಳದಿ ಅಂಗಿ)
ಚಂದ್ರಶೇಖರ ಹಿರೇಮಠ (ಹಳದಿ ಅಂಗಿ)   

ಕೊಪ್ಪಳ: ತಾಲ್ಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ವಿದ್ಯುತ್ ಬಿಲ್ ಬಾಕಿ ವಸೂಲಾತಿಗೆ ತೆರಳಿದ್ದ ಜೆಸ್ಕಾಂ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿದ್ದ ಚಂದ್ರಶೇಖರ ಹಿರೇಮಠ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಷಯವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಖಚಿತಪಡಿಸಿದ್ದಾರೆ.

ಚಂದ್ರಶೇಖರ್‌ ಗೃಹಬಳಕೆ ವಿದ್ಯುತ್ ಸಂಪರ್ಕ ಪಡೆದುಕೊಂಡು ಬಿಲ್‌ ಬಾಕಿ ಉಳಿಸಿಕೊಂಡಿದ್ದರು. ಅನಧಿಕೃತವಾಗಿ ಪಡೆದುಕೊಂಡಿದ್ದ ಸಂಪರ್ಕವನ್ನು ಪ್ರಶ್ನಿಸಿ, ಬಿಲ್‌ ಪಾವತಿಸುವಂತೆ ಹೇಳಿದ್ದಕ್ಕೆ ಜೆಸ್ಕಾಂ ಸಿಬ್ಬಂದಿ ಆರ್‌. ಮಂಜುನಾಥ ಅವರ ಮೇಲೆ ಹಲ್ಲೆ ಮಾಡಿದ್ದು, ಇದರ ವಿಡಿಯೊ ವೈರಲ್ ಆಗಿದೆ. ಮುನಿರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಚಂದ್ರಶೇಖರ್‌ ₹9 ಸಾವಿರ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿದ್ದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಅನಧಿಕೃತವಾಗಿ ಮತ್ತೆ ವಿದ್ಯುತ್‌ ಸಂಪರ್ಕ ಪಡೆದುಕೊಂಡಿದ್ದ. ಇದನ್ನು ನಮ್ಮ ಸಿಬ್ಬಂದಿ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆ’ ಎಂದು ಕೊಪ್ಪಳ ಜೆಸ್ಕಾಂ ಇಇ ರಾಜೇಶ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.