ಚಿತ್ರದುರ್ಗ: ಇನ್ಸ್ಟಾಗ್ರಾಂ ಮೂಲಕ ಪರಿಚಿತಳಾದ ಬಾಲಕಿಯನ್ನು ಪುಸಲಾಯಿಸಿ ಮೈಸೂರಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಅಪರಾಧಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹತ್ತು ವರ್ಷ ಕಠಿಣ ಜೈಲು ಹಾಗೂ ₹ 25 ಸಾವಿರ ದಂಡ ವಿಧಿಸಿ ಸೋಮವಾರ ಆದೇಶಿಸಿದೆ.
ಮೈಸೂರಿನ ನಿಶಾಂತ್ ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಸಂತ್ರಸ್ತ ಬಾಲಕಿಗೆ ₹ 4 ಲಕ್ಷ ಪರಿಹಾರಕ್ಕೆ ಆದೇಶದಲ್ಲಿ ಶಿಫಾರಸು ಮಾಡಿದ್ದಾರೆ.
ಬಾಲಕಿಯನ್ನು ಪುಸಲಾಯಿಸಿ ಮೈಸೂರಿಗೆ ಕರೆದೊಯ್ದ ಅಪರಾಧಿ, 2022ರ ಜುಲೈ 22ರಂದು ಅತ್ಯಾಚಾರ ಎಸಗಿದ್ದನು. ಈ ಸಂಬಂಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.