ಮಂಡ್ಯ: ಪಾಂಡವಪುರ ಸಮೀಪದ ಕನಗನಮರಡಿ ಗ್ರಾಮದ ಹತ್ತಿರ ವಿ.ಸಿ. ನಾಲೆಗೆ ಖಾಸಗಿ ಬಸ್ ಉರುಳಿ ಮೃತಪಟ್ಟ 25 ಮಂದಿಯ ಕುಟುಂಬಕ್ಕೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪರಿಹಾರ ಘೋಷಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ.
'ರಾಜ್‌ಕುಮಾರ್' ಹೆಸರಿನ ಬಸ್‌ನ ಸ್ಟೇರಿಂಗ್ ತುಂಡಾದ ಪರಿಣಾಮ ಬಸ್ ನಾಲೆಗೆ ಬಿದ್ದ ಪರಿಣಾಮ 25 ಮಂದಿ ಸಾವಿಗೀಡಾಗಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಹಗ್ಗ ಮತ್ತು ಕ್ರೇನ್ ಸಹಾಯದಿಂದ ಈವರೆಗೆ 23 ಶವಗಳನ್ನು ಹೊರ ತೆಗೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.