ಮಂಡ್ಯ: ಮದ್ದೂರು ತಾಲ್ಲೂಕು ಭಾರತೀನಗರದ ಡಾ.ಜಿ.ಮಾದೇಗೌಡ ಪ್ರತಿಷ್ಠಾನ ಕೊಡಮಾಡುವ ಸಮಾಜಸೇವಾ ಪ್ರಶಸ್ತಿಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಸಾವಯವ ಕೃಷಿಕ ಪ್ರಶಸ್ತಿಗೆ ಪ್ರಗತಿಪರ ರೈತ, ಎಂಜಿನಿಯರಿಂಗ್ ಪದವೀಧರ ತುಮಕೂರಿನ ಬಿ.ಜೆ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.
ಜುಲೈ 10ರಂದು, ನಗರದ ರೈತ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ದೊಡ್ಡರಂಗೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.