
ಪ್ರಜಾವಾಣಿ ವಾರ್ತೆ
ಸ್ಫೋಟ
ನವದೆಹಲಿ: ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪ ಕೀರ್ತಿ ಕೆಮಿಕಲ್ ಕಾರ್ಖಾನೆಯನ್ನು ಸ್ಥಳಾಂತರ ಮಾಡುವ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಸಂಬಂಧ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿರುವ ಆಯೋಗವು, ದುರ್ಘಟನೆ ಬಗ್ಗೆ ಎರಡು ವಾರಗಳೊಳಗೆ ವಿಸ್ತೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.