ADVERTISEMENT

ಮದುವೆ ಮುಂದೂಡಿದ ಡಿವೈಎಸ್‌ಪಿ: ಮೆಚ್ಚುಗೆಯ ಮಹಾಪೂರ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 3:02 IST
Last Updated 18 ಏಪ್ರಿಲ್ 2020, 3:02 IST
ಡಿವೈಎಸ್‌ಪಿ ಎಂ.ಜೆ.ಪೃಥ್ವಿ ನಡೆಗೆ ಸಂಸದೆ ಎ.ಸುಮಲತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಡಿವೈಎಸ್‌ಪಿ ಎಂ.ಜೆ.ಪೃಥ್ವಿ ನಡೆಗೆ ಸಂಸದೆ ಎ.ಸುಮಲತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ   
""

ಮಂಡ್ಯ: ಮಳವಳ್ಳಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜೆ.ಪೃಥ್ವಿ ಅವರು ತಮ್ಮ ವಿವಾಹ ಮುಂದೂಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ಏ.5ರಂದು ಧಾರವಾಡದಲ್ಲಿ ವಿವಾಹ ನಡೆಯಬೇಕಾಗಿತ್ತು. ಏ. 10ರಂದು ಮೈಸೂರಿನಲ್ಲಿ ಆರತಕ್ಷತೆ ನಡೆಯಬೇಕಾಗಿತ್ತು.

ಮಳವಳ್ಳಿ ಪಟ್ಟಣವೊಂದರಲ್ಲೇ 10 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ತಮ್ಮ ಮದುವೆ ಮುಂದೂಡಿದ್ದಾರೆ.

ADVERTISEMENT

ಪೃಥ್ವಿ ಅವರ ನಡೆಗೆ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಸದೆ ಎ.ಸುಮಲತಾ ಕೂಡ, ಹೆಮ್ಮೆಯ ಮಹಿಳಾ ಪೊಲೀಸ್ ಅಧಿಕಾರಿಗೆ ಸೆಲ್ಯೂಟ್ ಎಂಬ ಸಂದೇಶವನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಲಗ್ನ ಪತ್ರಿಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.