ಬೆಂಗಳೂರು: ಮಹಿಳೆಯರು ಅಧಿಕಾರದಲ್ಲಿರುವುದನ್ನು ಕೆಲವರು ಸಹಿಸಿಕೊಳ್ಳಲಾರರು. ಸತ್ಯದ ಪರವಾಗಿ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿ ಸುಮಲತಾ ಮತ್ತು ಜೆಡಿಎಸ್ ನಾಯಕರ ಮಧ್ಯೆ ಕಳೆದ ಕೆಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ. ಸುಮಲತಾ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಮತ್ತೆ ಟ್ವೀಟ್ ಮಾಡಿರುವ ಸುಮಲತಾ, ‘ಸತ್ಯದ ಪರವಾಗಿ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ!’ ಎಂದು ಉಲ್ಲೇಖಿಸಿದ್ದಾರೆ.
ಕೆ.ಆರ್.ಎಸ್. ಅಣೆಕಟ್ಟೆಯನ್ನು ರಕ್ಷಿಸಬೇಕು ಮತ್ತು ಅಕ್ರಮ ಗಣಿಗಾರಿಕೆ ತಡೆಯಬೇಕು ಎಂದೂ ಅವರು ಹ್ಯಾಷ್‌ಟ್ಯಾಗ್ ಮೂಲಕ ಉಲ್ಲೇಖಿಸಿದ್ದಾರೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.