30 ವರ್ಷಗಳ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ಮಂಡ್ಯ ಜಿಲ್ಲೆಗೆ ಸಿಕ್ಕಿದೆ. 1974 ಮತ್ತು 1994ರಲ್ಲಿ ಯಶಸ್ವಿಯಾಗಿ ಸಮ್ಮೇಳನವನ್ನು ನಡೆಸಿಕೊಟ್ಟ ‘ಸಕ್ಕರೆ ನಗರ’ ಈಗ ಮೂರನೇ ಬಾರಿಗೆ ನುಡಿಜಾತ್ರೆಯ ತೇರು ಎಳೆಯಲು ಸಜ್ಜಾಗಿದೆ. ‘ರಾಜ್ಯದಲ್ಲೇ ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ’ ಎಂಬ ಖ್ಯಾತಿ ಹೊಂದಿರುವ ಮಂಡ್ಯದಲ್ಲಿ ಡಿ.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಬಾಡೂಟ ಕುರಿತ ಪರ–ವಿರೋಧದ ಚರ್ಚೆಗಳ ನಡುವೆಯೇ, ಹಿಂದಿನ ಸಮ್ಮೇಳನಗಳಂತೆ ಊಟದ ಮೆನುವನ್ನು ಸಿದ್ಧಗೊಳಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.