ಮಂಡ್ಯ: ಜಿಲ್ಲೆಯಲ್ಲಿ ಒಂದೇ ದಿನ ಎಂಟು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯು 26ಕ್ಕೆ ಏರಿಕೆಯಾಗಿದೆ.
ಏಪ್ರಿಲ್ 24ರಂದು ಮುಂಬೈನಿಂದ ಶವ ತಂದು ಮೇಲುಕೋಟೆ ಬಳಿಯ ಕೊಡಗಳ್ಳಿಯಲ್ಲಿ ಸಂಸ್ಕಾರ ಮಾಡಲಾಗಿತ್ತು. ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಮುಂಬೈನಲ್ಲಿ ಮೃತಪಟ್ಟ ವ್ಯಕ್ತಿಗೆ ಕೋವಿಡ್-19 ಇತ್ತೇ ಎಂಬುದು ಗೊತ್ತಾಗಿಲ್ಲ. ಮಹಾರಾಷ್ಟ್ರದ ಆಂಬುಲೆನ್ಸ್ ಮೂಲಕ ಶವ ತರಲಾಗಿತ್ತು
ಮುಂಬೈನಿಂದ ಬಂದ ನಾಲ್ವರಿಗೆ ಕೋವಿಡ್-19 ದೃಢಪಟ್ಟಿದ್ದು, 179ನೇ ರೋಗಿಯ ಸಂಪರ್ಕದಿಂದ ಮಳವಳ್ಳಿಯಲ್ಲಿ ನಾಲ್ವರಿಗೆ ಸೋಂಕು ತಗುಲಿದೆ. ಈ ಮೂಲಕ ಮಳವಳ್ಳಿ ಪಟ್ಟಣವೊಂದರಲ್ಲೇ 19 ಮಂದಿಗೆ ಕೋವಿಡ್-19 ತಗುಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.