ADVERTISEMENT

ಬಾಂಬ್‌ ಭಯ ಸೃಷ್ಟಿಕರ್ತ ಆದಿತ್ಯನನ್ನು ಇಡೀ ರಾತ್ರಿ ವಿಚಾರಣೆ ಮಾಡಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 6:30 IST
Last Updated 23 ಜನವರಿ 2020, 6:30 IST
   

ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿ ಸಮಾಜದಲ್ಲಿ ಭಯ ಸೃಷ್ಟಿ ಮಾಡಿದ್ದ ದುಷ್ಕರ್ಮಿ ಆದಿತ್ಯ ರಾವ್‌ನನ್ನು ಮಂಗಳೂರು ಪೊಲೀಸರು ಬುಧವಾರ ಇಡೀ ರಾತ್ರಿ ವಿಚಾರಣೆಗೊಳಪಡಿಸಿದ್ದಾರೆ.

ಪಣಂಬೂರು ಪೊಲೀಸ್‌ ಠಾಣೆಯಲ್ಲಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಂದು ಆತನನ್ನು ಕೋರ್ಟ್‌ ಎದುರು ಹಾಜರುಪಡಿಸಲಾಗುತ್ತಿದೆ.

ಅದಿತ್ಯ ರಾವ್‌ನ ವಾರೆಂಟ್‌ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ 12ಗಂಟೆಗೆ ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯಾಕ್ಕೆ ಆತನನ್ನು ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅರೋಪಿಯನ್ನು ಬುಧವಾರ ರಾತ್ರಿ ಮಧ್ಯರಾತ್ರಿ 12ರ ಸುಮಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಅಲ್ಲಿಂದ ಆತನನ್ನು ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.