ADVERTISEMENT

ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ವಿಕಾಸ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 16:34 IST
Last Updated 29 ಜೂನ್ 2020, 16:34 IST
ಮಂಗಳೂರು ಪೊಲೀಸ್ ಆಯುಕ್ತರಾಗಿ ವಿಕಾಸ್‌ ಕುಮಾರ್‌ ವಿಕಾಶ್ ಅಧಿಕಾರ ಸ್ವೀಕಾರ
ಮಂಗಳೂರು ಪೊಲೀಸ್ ಆಯುಕ್ತರಾಗಿ ವಿಕಾಸ್‌ ಕುಮಾರ್‌ ವಿಕಾಶ್ ಅಧಿಕಾರ ಸ್ವೀಕಾರ   

ಮಂಗಳೂರು: ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ 2004ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ವಿಕಾಶ್‌ ಸೋಮವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ಅವರು ಬೆಂಗಳೂರಿನಲ್ಲಿ ವಾರ್ತಾ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವ ಉದ್ದೇಶದಿಂದ ಮೊದಲೇ ಕರ್ತವ್ಯದಿಂದ ಬಿಡುಗಡೆಯಾಗಿ ತೆರಳಿದ್ದರು. ಕಾರ್ಕಳದಲ್ಲಿರುವ ನಕ್ಸಲ್‌ ನಿಗ್ರಹ ಪಡೆಯ ಕೇಂದ್ರ ಕಚೇರಿಯಿಂದ ಬಿಡುಗಡೆಯಾಗಿ ಸೋಮವಾರ ಬಂದ ವಿಕಾಸ್‌ ಕುಮಾರ್‌, ಕಮಿಷನರೇಟ್‌ನ ಹಿರಿಯ ಅಧಿಕಾರಿಗಳಿಂದ ಅಧಿಕಾರ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT